ವಿವಾಹಿತ ಮಹಿಳೆಗೆ ಆಹಾರದ ಆಮಿಷ – ಆಂಬುಲೆನ್ಸ್ ನಲ್ಲಿ ಸಾಮೂಹಿಕ ಅತ್ಯಾಚಾರ
ರಾಜಸ್ಥಾನ : ರಾಜಸ್ಥಾನದಲ್ಲೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ.. 22 ವರ್ಷದ ವಿವಾಹಿತ ಮಹಿಳೆಯ ಮೇಲೆ ಕಾಮುಕರು ಆಂಬ್ಯುಲೆನ್ಸ್ ನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಆಹಾರದ ಆಮಿಷವೊಡ್ಡಿ ವಿವಾಹಿತ ಮಹಿಳೆಯನ್ನ ಆಂಬುಲೆನ್ಸ್ ನಲ್ಲಿ ಹತ್ತಿಸಿಕೊಂಡಿರುವ ಕಾಮುಕರು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಈ ಸಂಬಂಧ ಮಹಿಳೆಯು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆಂಬುಲೆನ್ಸ್ ಚಾಲಕ ಮತ್ತು ಆತನ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಚಾಲಕ ಸಹಚರರ ಜೊತೆ ಸೇರಿ ದುಷ್ಕೃತ್ಯ ಎಸಗಿದ್ದಾನೆ ಎಂದು ಮೋತಿ ದೂಂಗ್ರಿ ಠಾಣಾಧಿಕಾರಿ ಸುರೇಂದ್ರ ಪಾಂಚೋಲಿ ಹೇಳಿದ್ದಾರೆ. ಆರೋಪಿಗಳ ವಿರುದ್ಧ IPC ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು ಎಸ್‌ಸಿ / ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಮಡಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








