ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು: ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಅಪ್ರಾಪ್ತೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದು ಇದೀಗ ಜೈಲು ಸೇರಿದ್ದಾರೆ. ಬೆಂಗಳೂರಿನ ಹನುಮಂತನಗರ ಪೊಲೀಸರು ಐವರು ಆರೋಪಿಗಳನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ವೆಂಕಿ, ಅಭಿ, ಲೇಖನ್, ಚೇತನ್ , ರಕ್ಷತ್ ಬಂಧಿತ ಆರೋಪಿಗಳಾಗಿದ್ದಾರೆ. ಈ ಕಿಡಿಗೇಡಿಗಳು ಇನ್ ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯನ್ನ ಭೇಟಿ ಮಾಡುವ ನೆಪದಲ್ಲಿ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಜನವರಿ 17ರಂದು ಈ ಕಿರಾತಕರು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದರು. ಬಳಿಕ ಈ ಸಂಬಂಧ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಬಾಬು ಎಂಬುವವನು ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








