ದಕ್ಷಿಣ ಕನ್ನಡ | ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್
ಮಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಈ ಬಗ್ಗೆ ಸ್ವತಃ ಬಾಲಕಿಯೇ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಅಲ್ಲದೆ ಐವರು ಕಾಮುಕರ ಹೆಸರನ್ನು ಕೂಡ ತಿಳಿಸಿದ್ದಾಳೆ.
ಬಾಲಕಿಗೆ ಮತ್ತು ಬರುವ ಜ್ಯೂಸ್ ಕುಡಿಸಿ ಅತ್ಯಾಚಾರ ನಡೆಸಲಾಗಿದೆ. ಸದ್ಯ ಸಂತ್ರಸ್ತ ಬಾಲಕಿಗೆ ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವೆದಿದೆ.
ಬಾಲಕಿಯ ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ಕೃತ್ಯದ ಬಗ್ಗೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.








