ಗಂಡನ ಎದುರಲ್ಲೇ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ
ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಮನುಕುಲವೇ ತಲೆ ತಗ್ಗಿಸುವಂತಹ ಹೇಯ ಕೃತ್ಯ ಬೆಳಕಿಗೆ ಬಮದಿದೆ.. 35 ವರ್ಷದ ಮಹಿಳೆಯನ್ನು ಅಪಹರಿಸಿ ಗಂಡನ ಎದುರಲ್ಲೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಧಾರ್ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆ ಮತ್ತು ಆಕೆಯ ಪತಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮನವಾರ್ ಪಟ್ಟಣದಲ್ಲಿರುವ ಬ್ರಿಡ್ಜ್ ಸಮೀಪ ಬಂದಾಗ ಅಪರಿಚಿತರು ಅವರ ಮೇಲೆ ಕಲ್ಲು ತೂರಾಟ ನಡೆಸಿ ಬೈಕ್ ನಿಲ್ಲಿಸಿದ್ದಾರೆ. ಬಳಿಕ ಪತಿಯನ್ನು ಮರಕ್ಕೆ ಕಟ್ಟಿ ಆತನ ಬಳಿಯಲ್ಲಿದ್ದ ಪರ್ಸ್ ಮತ್ತು ಒಡವೆಗಳನ್ನು ಕಿತ್ತುಕೊಂಡಿದ್ದಾರೆ.
ಅತ್ಯಾಚಾರ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.. ಸಹಾಯಕ್ಕಾಗಿ ಅಂಗಲಾಚಿ ಅಳುತ್ತಿದ್ದ ದಂಪತಿಯನ್ನು ಕಂಡ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಹಿಳೆಯ ಗುಪ್ತಾಂಗದಲ್ಲಿ ಗಂಭೀರ ಗಾಯಗಳಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದು ಎರಡು ದಿನಗಳಾದರೂ ಆರೋಪಿಗಳು ಪತ್ತೆಯಾಗಿಲ್ಲ.
ಪೊಲೀಸರು ಅವರನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಯ ಜಿಲ್ಲೆಗಳಲ್ಲೂ ಆರೋಪಿಗಳಿಗಾಗಿ ಶೋಧಕಾರ್ಯ ಕೈಗೊಳ್ಳಲಾಗಿದೆ.