ರಸ್ತೆಯಲ್ಲಿ ಹೋಗುತ್ತಿದ್ದ ವಿವಾಹಿತ ಮಹಿಳೆಯ ಅಪಹರಣ, ಸಾಮೂಹಿಕ ಅತ್ಯಾಚಾರ
ರಸ್ತೆಯಲ್ಲಿ ಹೋಗುತ್ತಿದ್ದ ವಿವಾಹಿತ ಮಹಿಳೆಯನ್ನ ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ಕೀಚಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.
ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಝಡೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್‍ಪುರ ಚೆಕ್ ಪೋಸ್ಟ್‌ನಿಂದ ಕೇವಲ 500 ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು. ಸಂತ್ರಸ್ತೆ ಇಬ್ಬರು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿವಾಹಿತ ಮಹಿಳೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಮೂವರು ಯುವಕರು ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದು. ದಾರಿ ಮಧ್ಯೆ ಆಕೆಯನ್ನು ತಡೆದು ಅಸಭ್ಯವಾಗಿ ವರ್ತಿಸಿದ್ದಾರೆ. ಬಳಿಕ ಇಬ್ಬರು ಯುವಕರು ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ದೂರು ದಾಖಲಸಿಕೊಂಡಿರುವ ಪೊಲೀಸರು. ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.








