ಉಡುಪಿ: ಜಿಲ್ಲೆಯಲ್ಲಿ ಗ್ಯಾಂಗ್ ರೇಪ್ ವೊಂದು ನಡೆದಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮದ್ಯದಲ್ಲಿ ಮಾದಕ ವಸ್ತು ಬೆರೆಸಿ 21 ವರ್ಷದ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆಸಲಾಗಿದೆ ಎನ್ನಲಾಗಿದೆ. ಈ ಘಟನೆ ಘಟನೆ ಕಾರ್ಕಳ (Karkala) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಸಂಬಂಧಿಕರು ದೂರು ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೇ, ಸಾಮೂಹಿಕ ಅತ್ಯಾಚಾರ (Gang Rape)ದ ಇನ್ನುಳಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿವೆ.
ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದ. ನಂತರ ಸ್ನೇಹಿತರನ್ನು ಕರೆಯಿಸಿ ಬಿಯರ್ ಬಾಟಲಿ ತರಿಸಿದ್ದ. ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೃತ್ಯ ನಡೆಸಿದ ನಂತರ ಯುವತಿಯನ್ನು ಮನೆಯ ಹತ್ತಿರ ಬಿಟ್ಟು ಹೋಗಿದ್ದಾರೆ ಎಂದು ಸಂಘಟನೆಗಳು ಆರೋಪಿಸಿವೆ.
ವಿಚಾರ ಹೊರ ಬೀಳುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿದ್ದಾರೆ. ಪೋಷಕರ ಹೇಳಿಕೆಯಂತೆ ಅತ್ಯಾಚಾರ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.







