ಪತಿ ಮೇಲೆ ಹಲ್ಲೆ ನಡೆಸಿ ಮಹಿಳೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕರು
ಮಹಿಳೆಯೊಬ್ಬರು ರಾತ್ರಿ ಹೊತ್ತಲ್ಲಿ ಗಂಡನ ಜೊತೆ ಮನೆಗೆ ಬರುತ್ತಿದ್ದ ವೇಳೆ ನಾಲ್ವರು ಯುವಕರು ಏಕಾಏಕಿ ದಾಳಿ ನಡೆಸಿ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಅರಗ ಗ್ರಾಮದಲ್ಲಿ ಮಹಿಳೆಯೊಬ್ಬಳು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಆಕೆ ಗಂಡನೊಡನೆ ತೀರ್ಥಹಳ್ಳಿ ಆಸ್ಪತ್ರೆಗೆ ಹೋಗಿ ರಾತ್ರಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ನಾಲ್ವರು ಯುವಕರು ಅಡ್ಡಗಟ್ಟಿ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಪತಿ ಕುಸಿದು ಬಿದ್ದು ಮೂರ್ಛೆ ಹೋಗಿಹೋಗಿದ್ದಾರೆ.
ನಂತರ ಮಹಿಳೆಯನ್ನ ನಿಂದಿಸಿ ಪಕ್ಕದಲ್ಲಿದ್ದ ರಬ್ಬರ್ ತೋಟಕ್ಕೆ ಎಳೆದುಕೊಂಡು ಹೋಗಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಹಿಳೆ ಜೋರಾಗಿ ಕಿರಿಚಿಕೊಂಡಾಗ ಪತಿ ಎಚ್ಚರವಾಗಿದೆ ಅವರು ಸಹ ಜೋರಾಗಿ ಕಿರುಚಾಡಿದಾಗ ಸ್ಥಳಿಯರು ಕೂಡಲೆ ಸಹಾಯಕ್ಕೆ ಧಾವಿಸಿದ್ದಾರೆ.
ಸ್ಥಳಿಯರು ಅಟೋ ಹತ್ತಿಸಿ ಮನೆಗೆ ಕಳುಸಿಹಿಕೊಟ್ಟಿದ್ದಾರೆ. ಮರುದಿನ ಸಂಬಂಧಿಕರು ಹಲ್ಲೆಗೊಳಗಾಗಿ ಗಾಯಗೊಂಡ ಪತಿಯನ್ನ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದೇವೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವುದಾಗಿ ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದರು.