Yadgir | ಗಿರಿನಾಡು ಯಾದಗಿರಿಯಲ್ಲಿ ಗಾಂಜಾ ಘಾಟು !
ಯಾದಗಿರಿ : ಮಾದಕ ವ್ಯಸನಿಗಳ ಹಾಟ್ ಸ್ಪಾಟ್ ಆಯಿತಾ ಗಿರಿನಾಡು ಯಾದಗಿರಿ ? ಎಂಬ ಪ್ರಶ್ನೆ ಇದೀಗ ಹುಟ್ಟಿಕೊಂಡಿದೆ.
ಯಾಕಂದರೇ ನಗರದ ಪಾನ್ ಬೀಡಾ ಅಂಗಡಿಗಳಲ್ಲಿ ಗಾಂಜಾ ಚಾಕಲೇಟ್ ಮಾರಾಟವಾಗುತ್ತಿವೆ.
ಉತ್ತರ ಪ್ರದೇಶದ ಗಾಂಜಾ ನಶೆಯ ಚಾಕಲೇಟ್ ಯಾದಗಿರಿ ಜಿಲ್ಲೆಯಲ್ಲಿ ಮಾರಾಟವಾಗುತ್ತಿದ್ದು, ಅಬಕಾರಿ ಇಲಾಖೆ ಪೊಲೀಸರು ಮಿಂಚಿನ ದಾಳಿ ನಡೆಸಿ ಮಾರಾಟಗಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಹಾಪೂರ ನಗರದಲ್ಲಿ ಪಾನ್ ಶಾಪ್ ಇಟ್ಟುಕೊಂಡು ಗಾಂಜಾ ನಶೆಯ ಚಾಕಲೇಟ್ ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಜೀತೆಂದ್ರ ಹಾಗೂ ಮೋಹಿತ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಶಹಾಪೂರ ಅಬಕಾರಿ ಉಪ ಅಧೀಕ್ಷಕ ಮಲ್ಲಿಕಾರ್ಜುನ ರಡ್ಡಿ,ಕೇದಾರನಾಥ,ದನರಾಜ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.