ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು 198 ರೂ. ಕಡಿಮೆ ಮಾಡಲಾಗಿದೆ. ಹೋಟೆಲ್, ರೆಸ್ಟೋರೆಂಟ್ಗಳು, ಟೀ ಅಂಗಡಿಗಳಿಗೆ ಇದರಿಂದ ನೆರವಾಗಲಿದೆ.
ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಎಲ್ಪಿಜಿ ಸಿಲಿಂಡರ್ ದರ 2,219 ರಿಂದ 2,021ರೂಗೆ ಇಳಿಸಲಾಗಿದೆ..
ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗುತ್ತದೆ. ಜೂನ್ 1ರಂದೂ 135 ರೂ. ದರ ಇಳಿಕೆ ಮಾಡಲಾಗಿತ್ತು.