ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಮಂಜನಾಡಿ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ತಾಯಿ ಮತ್ತು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಕಳೆದ ರಾತ್ರಿ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ.
ಗಾಯಾಳುಗಳಿಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಫೋಟಕ್ಕೆ ಗ್ಯಾಸ್ ಲೀಕೇಜ್ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ತಕ್ಷಣವೇ ಬೆಂಕಿ ನಂದಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.