ಚೀನಾದಲ್ಲಿ ಅನಿಲ ಸ್ಫೋಟ – ದುರಂತದಲ್ಲಿ 11 ಸಾವು, 37 ಜನರಿಗೆ ಗಾಯ
ಚೀನಾ : ಚೀನಾದ ಹುಬೈ ಪ್ರಾಂತ್ಯದಲ್ಲಿ ಭಾರಿ ಅನಿಲ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ಸುಮಾರು 11 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಲದೇ ಘಟನೆಯಲ್ಲಿ 37 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ೆನ್ನಲಾಗಿದ್ದು, ಅವರೆಲ್ಲರನ್ನೂ ಸ್ಥಳೀಯ ಆಸ್ಪತಯ್ರೆಗಳಿಗೆ ರವಾನಿಸಿ ಚಿಕಿತ್ಸೆ ನೀಡಲಾಗ್ತಿದೆ.
ಶಿಯಾನ್ ಜಿಲ್ಲೆಯ ಶಿಯಾನ್ ತರಕಾರಿ ಮಾರುಕಟ್ಟೆ ಬಳಿ ಸ್ಥಳೀಯ ಮುಂಜಾನೆ ಸ್ಫೋಟ ಸಂಭವಿಸಿದ್ದು, ಅನೇಕ ಕಟ್ಟಡಗಳಿಗೆ ಹಾನಿಯಾಗಿದೆ ಎಂದೂ ಸಹ ವರದಿಯಾಗಿದೆ. ಘಟನೆ ನಂತರ ಅನೇಕ ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಹೇಳಲಾಗ್ತಿದ್ದು, ಕಟ್ಟಡ ಅವಶೇಷಗಳನ್ನು ತೆರವುಗೊಳಿಸುವಲ್ಲಿ ರಕ್ಷಣಾ ಸಿಬ್ಬಂದಿಗಳು ನಿರತರಾಗಿದ್ದಾರೆ ಎನ್ನಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








