ಬೆಂಗಳೂರು : ಹೆಮ್ಮಾರಿ ಕೊರೊನಾ ಕಾಟದ ಮಧ್ಯೆ ರಾಜ್ಯದಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಸಡಗರ ಸಂಭ್ರಮದಲ್ಲಿ ಕೊರೊನಾ ಇರೋದನ್ನೇ ಮರೆತಂತೆ ಮಾರ್ಕೆಟ್ ಗೆ ಜನರು ಮುಗಿಬಿದ್ದಿದ್ದಾರೆ. ಹಬ್ಬದ ವಸ್ತುಗಳನ್ನು ಖರೀದಿ ಮಾಡಲು ಬೆಳ್ಳಂಬೆಳಿಗ್ಗೆ ಮಾರ್ಕೆಟ್ ಗಳಲ್ಲಿ ಜನರು ಗುಂಪು ಗೂಡಿದ್ದಾರೆ.
ಸಾಮಾಜಿಕ ಅಂತರವನ್ನು ಮರೆತು, ಮಾಸ್ಕ್ ಹಾಕಿಕೊಳ್ಳದೆ ಅಗತ್ಯ ವಸ್ತುಗಳನ್ನ ಖರೀದಿ ಮಾಡುವುದರಲ್ಲಿ ಜನರು ಬ್ಯುಸಿಯಾಗಿದ್ದಾರೆ. ನಗರದ ಬಸವನಗುಡಿ ಗಾಂಧಿ ಬಜಾರ್, ಕೆ.ಆರ್ ರೋಡ್, ಯಶವಂತಪುರ ಮಾರುಕಟ್ಟೆಗಳಲ್ಲಿ ಜನ ಕೊರೊನಾ ಆತಂಕವನ್ನು ಮರೆತು ಅಜಾಗೃತರಾಗಿ ವ್ಯಾಪಾರ ಮಾಡುತ್ತಿದ್ದಾರೆ. ಹಬ್ಬಕ್ಕೆ ಹೂ, ಹಣ್ಣು, ಬಾಳೆ ಕಂದಿನ ಮಾರಾಟ ನಗರದಲ್ಲಿ ಜೋರಾಗಿ ನಡೆಯುತ್ತಿದೆ.