ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಕೊಂಡಿದೆ. ಇದರ ಮಧ್ಯೆ ಸ್ಥಳೀಯ ಮಟ್ಟದಲ್ಲಿ ಅಲ್ಲಿನ ನಾಯಕರು ತಮಗೆ ತೋಚಿದ ರೀತಿಯಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೆ ತಮ್ಮ ಸ್ವಂತ ಖರ್ಚಿನಲ್ಲಿ ಮಾಸ್ಕ್ ಗಳನ್ನು ವಿತರಿಸುತ್ತಿದ್ದಾರೆ. ಅದರಂತೆ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಸ್ವತಃ ತಾವೇ ಕಾರು ಚಲಾಯಿಸಿಕೊಂಡು ಬಂದು, ಮಾಸ್ಕ್ ಹಾಗೂ ಸ್ಯಾನಿಟೈಸರ್ ಗಳನ್ನ ವಿತರಿಸಿದ್ದಾರೆ. ಕೊರೊನಾ ಸೋಂಕು ತಡೆಗೆ ಶ್ರಮಿಸುತ್ತಿರುವ ಪೊಲೀಸರು ಹಾಗೂ ವೈದ್ಯ ಸಿಬ್ಬಂದಿಗೆ ಶಾಸಕ ಗೌರಿಶಂಕರ್, ಸಾಂಕೇತಿಕವಾಗಿ 50 ಸಾವಿರ ಮಾಸ್ಕ್, 2,500 ಸ್ಯಾನಿಟೈಸರ್ ವಿತರಣೆ ಮಾಡಿದ್ದಾರೆ.
ಇನ್ನು ಕಳೆದ ವಾರ ಕೂಡ ಶಾಸಕ ಗೌರಿಶಂಕರ್ ಅವರು, 50 ಸಾವಿರ ಮಾಸ್ಕ್ ಹಾಗೂ 2,500 ಸ್ಯಾನಿಟೈಸರ್ ವಿತರಿಸಿದ್ದರು. ವೈರಸ್ ಬಗ್ಗೆ ಅರಿವು ಮೂಡಿಸಲು ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಸಂಚರಿಸುವ ಪ್ರಚಾರ ವಾಹನಕ್ಕೆ ಚಾಲನೆ ನೀಡಿದ್ದರು.








