ಕಾಲಿವುಡ್ ನಟ ವಿಶಾಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ
ಕಾಲಿವುಡ್ ನ ಖ್ಯಾತ ನಟ ಇತ್ತೀಚೆಗೆ ವಿವಾದಗಳಿಂದಲೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಇದೀಗ ನಟಿಯೊಬ್ಬರು ವಿಶಾಲ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಹೌದು.. ವಿಶಾಲ್ ಹಾಗೂ ಆತನ ಗೆಳೆಯರು ಹಲವಾರು ನಟಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ಗಾಯತ್ರಿ ರಘುರಾಮ್ ಗಂಭೀರ ಆರೋಪ ಮಾಡಿದ್ದಾರೆ.
ಕನ್ನಡದ ‘ಮನಸೆಲ್ಲಾ ನೀನೆ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಗಾಯತ್ರಿ ಈಗ ಬಿಜೆಪಿ ಸೇರಿ ರಾಜಕಾರಣಿ ಆಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ನಟಿ ವಿಶಾಲ್ ಕುರಿತು ಸರಣಿ ಟ್ವೀಟ್ ಮಾಡಿ ಆರೋಪಗಳನ್ನ ಹೊರೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವಿಶಾಲ್ ಹಾಗೂ ಗೆಳೆಯರು ಚಿತ್ರೋದ್ಯಮಕ್ಕೆ ಬರುವ ಹೊಸ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಸಿಕೊಂಡು ಬಿಸಾಡುವ ಪ್ರವೃತ್ತಿ ಇವರದ್ದು’ ಎಂದಿದ್ದಾರೆ.
‘ಚಿತ್ರರಂಗದಲ್ಲಿ ಇರುವ ವ್ಯಕ್ತಿಯಾಗಿ ಮೊದಲಿಗೆ ಲೈಂಗಿಕ ದೌರ್ಜನ್ಯದ ವಿರುದ್ಧ ದನಿ ಎತ್ತಬೇಕು. ವಿಶಾಲ್ ಒಮ್ಮೆ ನಿನ್ನ ಸುತ್ತಲೂ ನೋಡು ಏನಾಗುತ್ತಿದೆ ಎಂದು. ಹೊಸದಾಗಿ ಚಿತ್ರರಂಗಕ್ಕೆ ಬರುತ್ತಿರುವ ನಟಿಯರ ಸ್ಥಿತಿ ಹೇಗಿದೆಯೆಂದು. ನಟಿಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ನೋಡು. ನೀನು ಮತ್ತು ನಿನ್ನ ಗೆಳೆಯರು ಅದೇ ವಿಭಾಗಕ್ಕೆ ಸೇರಿದವರು. ಬಳಸಿ ಬಿಸಾಡುವುದು ನಿಮಗೆ ಅಭ್ಯಾಸವಾಗಿ ಹೋಗಿದೆ. ಸಾಕಷ್ಟು ಮಂದಿ ನಟಿಯರು ನಿಮ್ಮಿಂದ ತೊಂದರೆ ಅನುಭವಿಸಿದ್ದಾರೆ’ ಎಂದಿದ್ದಾರೆ.
ಅಲ್ಲದೇ ‘ನೀನು ಪದೇ-ಪದೇ ಪೀಡಿಸುವ ಕಾರಣದಿಂದ ನಾಯಕ ನಟಿಯರು ನಿನ್ನಿಂದ ದೂರ ಓಡುತ್ತಾರೆ. ಈ ವಿಷಯ ನಿನಗೆ ಗೊತ್ತಿದೆಯೇ?’ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ‘ಸಿನಿಮಾ ರಂಗದ ಯುವತಿಯರನ್ನು ಕಾಪಾಡಲು ನೀನು ನಿನ್ನ ಹೀರೋತನ ಪ್ರದರ್ಶಿಸಬೇಕಿತ್ತು. ಆದರೆ ನೀನು ವಿಲನ್ ನಂತೆ ವರ್ತಿಸಿದೆ’ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.