ಗಾಝಿಯಾಬಾದ್ ನಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ ಪ್ರಕರಣ – ಟ್ವಿಟ್ಟರ್ ಗೆ ನೋಟೀಸ್ ಕೊಟ್ಟ ಪೊಲೀಸರು..!
ಉತ್ತರ ಪ್ರದೇಶ: ಇತ್ತೀಚೆಗೆ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬಿಂಬಿಸುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಕೆಲವರು ಪೋಸ್ಟ್ ಮಾಡಿದ್ದರು. ವೃದ್ಧ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದ ಪ್ರಕರಣದ ಮೊಕದ್ದಮೆ ಸಂಬಂಧ ವಿಚಾರಣೆಯಲ್ಲಿ ಭಾಗವಹಿಸುವಂತೆ ಟ್ವಿಟರ್ ಸಂಸ್ಥೆಯ ಭಾರತದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ನೋಟಿಸ್ ನೀಡಿದ್ದಾರೆ. ದಿನಗಳ ಒಳಗೆ ಲೋನಿ ಪೊಲೀಸ್ ಠಾಣೆಗೆ ಹಾಜರಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಲು ಮನೀಶ್ ಅವರಿಗೆ ಸೂಚಿಸಿದ್ದಾರೆ.
ಈ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ವೈಯಕ್ತಿಕ ಕಾರಣಗಳಿಂದ ನಡೆದಿರುವ ಘಟನೆ. ಇದರಲ್ಲಿ ಕೋಮುದ್ವೇಷದ ಉದ್ದೇಶ ಇಲ್ಲ. ಆದರೆ ಈ ವಿಡಿಯೊಗಳನ್ನು ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಹಂಚಿಕೊಳ್ಳಲಾಗಿದೆ. ಆದರೆ ಈ ಟ್ವೀಟ್‌ಗಳನ್ನು ಅಳಿಸುವ ಕ್ರಮವನ್ನು ಟ್ವಿಟರ್ ಸಂಸ್ಥೆ ತೆಗೆದುಕೊಂಡಿಲ್ಲ ಎಂದು FIRನಲ್ಲಿ ಹೇಳಲಾಗಿದೆ. ಹೀಗಾಗಿ ಪೊಲೀಸರು ಟ್ವಿಟ್ಟರ್ ಗೆ ನೋಟೀಸ್ ನೀಡಿದ್ದಾರೆ.. ಅದು ಅಲ್ಲದೇ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳ ಜಾರಿಯಾದ ನಂತರ ಇದೇ ಮೊದಲ ಬಾರಿಗೆ ಈ ರೀತಿಯಾದ ಕ್ರಮ ಕೈಗೊಳ್ಳಲಾಗ್ತಿದೆ.
ನಿರಂತರ ಕರೆಂಟ್ ಸಮಸ್ಯೆ : ವಿದ್ಯುತ್ ಕಂಬ ಏರಿದ ಸಚಿವ – ಫೋಟೋ ವೈರಲ್..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








