ಬೆಂಗಳೂರು ನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, GBA ನಗರವ್ಯಾಪಿ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸಜ್ಜಾಗಿದೆ.
ಈ ಅಭಿಯಾನದಡಿ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ ಸಾರ್ವಜನಿಕ ಸ್ಥಳಗಳನ್ನು ವರ್ಷಗಳಿಂದ ಆಕ್ರಮಿಸಿಕೊಂಡಿರುವ ವಾರಸುದಾರರಿಲ್ಲದ ಹಳೆಯ ವಾಹನಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಮಾಹಿತಿಯ ಪ್ರಕಾರ, ಈ ವಿಶೇಷ ಸ್ವಚ್ಛತಾ ಆಂದೋಲನಕ್ಕೆ ಮುಂದಿನ ಒಂದು ವಾರದೊಳಗೆ ಅಧಿಕೃತ ಚಾಲನೆ ದೊರೆಯುವ ನಿರೀಕ್ಷೆಯಿದೆ.
ಈ ಸಂಬಂಧ ಕೃಷ್ಣಭೈರೇಗೌಡ ಅವರು GBA ಹಿರಿಯ ಅಧಿಕಾರಿಗಳು ಹಾಗೂ ನಗರದ ಐದು ವಲಯಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾರ್ಯಾಚರಣೆಗೆ ಅಗತ್ಯವಾದ ಆಕ್ಷನ್ ಪ್ಲಾನ್ ಸಿದ್ಧಪಡಿಸಿದ್ದಾರೆ.
ನಗರದ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವುದು, ಅಕ್ರಮ ಆಕ್ರಮಣಗಳನ್ನು ತೆರವುಗೊಳಿಸುವುದು ಹಾಗೂ ಸಂಚಾರಕ್ಕೆ ಅನುಕೂಲಕರ ವಾತಾವರಣ ಕಲ್ಪಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.








