ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geeta Shivraj Kumar) ಇಂದು ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆಯಲ್ಲಿ ಸೊರಬ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದ್ದಾರೆ.
ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಕಾಂಗ್ರೆಸ್ ಸೇರುವಂತೆ ಮಧು ಬಂಗಾರಪ್ಪ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿದ ಮಧು ಬಂಗಾರಪ್ಪ, ಸೊರಬ ಕ್ಷೇತ್ರದ ಗೆಲುವಿಗೆ ಗೀತಾ ಅವರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಗೀತಾ ಶಿವರಾಜ್ ಕುಮಾರ್ ಅವರ ಕಿರಿಯ ಸಹೋದರ ಮಧು ಮಧು ಬಂಗಾರಪ್ಪ (Madhu Bangarappa) ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ವಿರುದ್ಧ ಸೊರಬ ಕ್ಷೇತ್ರದಲ್ಲಿ (Soraba) ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಹೀಗಾಗಿ ಬೆಂಬಲಿಸುವುದಕ್ಕಾಗಿ ಪಕ್ಷ ಸೇರುವಂತೆ ಮನವಿ ಮಾಡಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಅವರು ಪ್ರತಿ ಬಾರಿಯೂ ಮಧು ಅವರನ್ನು ಬೆಂಬಲಿಸುತ್ತ ಬಂದಿದ್ದಾರೆ. ಅಲ್ಲದೇ, ಗೀತಾ ಶಿವರಾಜ್ ಕುಮಾರ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿ, ಸೋಲು ಕಂಡಿದ್ದರು. ಈ ಬಾರಿ ಸಹೋದರನನ್ನು ಗೆಲ್ಲಿಸಲೇಬೇಕು ಎನ್ನುವ ಕಾರಣದಿಂದಾಗಿ ಕಾಂಗ್ರೆಸ್ ಗೆ ಸೇರ್ಪಡೆ ಆಗುವ ಮೂಲಕ ತಮ್ಮ ಮತ್ತೋರ್ವ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧವೇ ಪ್ರಚಾರ ಮಾಡಲಿದ್ಧಾರೆ.