ಬೆಂಗಳೂರು, ಮೇ 14 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಯನ್ನು ಜುಲೈ 30 ಮತ್ತು 31 ರಂದು ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಾಸ್ಕ್, ಸ್ಯಾನಿಟೈಸರ್ ಸಹಿತ ಮುಂಜಾಗ್ರತಾ ಕ್ರಮದೊಂದಿಗೆ ಸಿಇಟಿ ನಡೆಸಲು ನಿರ್ಧರಿಸಿದ್ದೇವೆ. ಪರೀಕ್ಷಾ ಕೇಂದ್ರಗಳನ್ನು ಕೂಡ ಹೆಚ್ಚಿಸಲು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಗೆಟ್ ಸೆಟ್ ಗೋ ಮೂಲಕ ನೀಟ್, ಸಿಇಟಿ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಕೋಚಿಂಗ್ ನೀಡಲಾಗುತ್ತಿದ್ದು, ಯೂಟ್ಯೂಬ್ ಮೂಲಕ ಕಲಿಕಾ ವೀಡಿಯೋ ಡೌನ್ ಲೋಡ್ ಗೆ ಅವಕಾಶ ನೀಡಲಾಗಿದೆ ಎಂದರು.
ಪದವಿ ತರಗತಿಗಳ ಶೈಕ್ಷಣಿಕ ವರ್ಷ ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದ್ದು, ಎಂಜಿನಿಯರಿಂಗ್ ಮತ್ತು ಪದವಿ ತರಗತಿಗಳ ಪಠ್ಯದ ಬಗ್ಗೆ ಕೆಲ ಮಹತ್ವದ ಸೂಚನೆಗಳನ್ನು ಈಗಾಗಲೇ ನೀಡಲಾಗಿದೆ. ಮೇ 31 ರ ಒಳಗೆ ಆನ್ ಲೈನ್ ಮೂಲಕ ಪಾಠಗಳನ್ನು ಮುಗಿಸಲು ತಿಳಿಸಲಾಗಿದ್ದು, ಬಳಿಕ ಪರೀಕ್ಷೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...








