ಕಾಂಗ್ರೆಸ್ ಪಕ್ಷದ ಪ್ರಸ್ತಾಪ ತಿರಸ್ಕರಿಸಿದ ಗುಲಾಂ ನಬಿ ಆಜಾದ್ – ಹೆಚ್ಚಿದ ಬಿರುಕು
ಜಮ್ಮು ಕಾಶ್ಮೀರದ ರಾಜಕೀಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಕಾಂಗ್ರೆಸ್ ಮಂಗಳವಾರರ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಅವರನ್ನ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿಲಾಗಿತ್ತು. ಆದರೆ ಅಧ್ಯಕ್ಷರಾಗಿ ಆಯ್ಕೆಯಾದ ಎರಡು ಗಂಟೆಗಳ ನಂತರ ಗಲಾಂ ನಬಿ ಆಜಾದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ರಾಜೀನಾಮೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಮೂಲಗಳ ಪ್ರಕಾರ, ತಮ್ಮ ಸಲಹೆ ಮತ್ತು ಶಿಫಾರಸ್ಸುಗಳನ್ನ ನಿರ್ಲಕ್ಷಿಸಲಾಗುತ್ತಿದೆ ಎಂದು ಗುಲಾಂ ನಬಿ ಆಜಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಿಂದೇಟು ಹಾಕಿದ್ದಾರೆ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಆಜಾದ್ ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.
ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷದ ಹಲವು ಬದಲಾವಣೆಗಳನ್ನ ಪ್ರತಿನಿಧಿಸುವ G23 ಭಾಗವಾಗಿದ್ದರು. ಆ ಎಲ್ಲಾ ಚಟುವಟಿಕೆಗಳ ನಡುವೆ, ಈ ರಾಜೀನಾಮೆ ಗುಲಾಂ ನಬಿ ಆಜಾದ್ ಮತ್ತು ಕಾಂಗ್ರೆಸ್ ಜೊತೆಗಿನ ಅವರ ಸಂಬಂಧದ ಬಗ್ಗೆ ಪ್ರಶ್ನೆಗಳನ್ನ ಹುಟ್ಟುಹಾಕಿದೆ. ಈ ವರ್ಷ ಗುಲಾಂ ನಬಿ ಆಜಾದ್ ಅವರಿಗೆ ಕೇಂದ್ರದಿಂದ ಪದ್ಮಭೂಷಣ ಪ್ರಶಸ್ತಿ ನೀಡಲಾಗಿತ್ತು.
ವಿಕಾರ್ ರಸೂಲ್ ವಾನಿ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷ
ಮತ್ತೊಂದೆಡೆ ವಿಕಾರ್ ರಸೂಲ್ ವಾನಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಯಿತು. ಇದಕ್ಕೂ ಮುನ್ನ ಅಹ್ಮದ್ ಮಿರ್ ರಾಜ್ಯಾಧ್ಯಕ್ಷರಾಗಿದ್ದು, ಅವರ ರಾಜೀನಾಮೆ ಅಂಗೀಕರಿಸಲಾಗಿದೆ. 47 ವರ್ಷ ವಯಸ್ಸಿನ ವಾನಿ ಗುಲಾಂ ನಬಿ ಆಜಾದ್‌ಗೆ ತುಂಬಾ ಹತ್ತಿರವಾಗಿದ್ದಾರೆ. ವಾನಿ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಬನಿಹಾಲ್‌ನ ಶಾಸಕರಾಗಿದ್ದಾರೆ.








