ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಗುಲಾಂ ನಬಿ ಆಜಾದ್ ಗುಡ್ ಬೈ
ಕಾಂಗ್ರೆಸ್ ಪಕ್ಷಕ್ಕೆ ಗುಲಾಂ ನಬಿ ಆಜಾದ್ ಬಿಗ್ ಶಾಕ್ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಗಳನ್ನು ಬಯಸಿ ಮಾಡಿಕೊಂಡಿದ್ದ ಜಿ 23 ನಾಯಕರ ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್ ಅವರು ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಆರೋಗ್ಯದ ಕಾರಣ ಮುಂದಿಟ್ಟು ರಾಜೀನಾಮೆ ನೀಡುವ ಮೂಲಕ ಪಕ್ಷದ ಉನ್ನತ ನಾಯಕತ್ವದ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದರು.
https://twitter.com/ANI/status/1563045483341172738?ref_src=twsrc%5Etfw%7Ctwcamp%5Etweetembed%7Ctwterm%5E1563045488567263232%7Ctwgr%5E7d75aeca220ef5dddcce8370090ecbf46153bb76%7Ctwcon%5Es2_&ref_url=https%3A%2F%2Fwww.kannadaprabha.com%2Fnation%2F2022%2Faug%2F26%2Fveteran-leader-ghulam-nabi-azad-resigns-from-congress-party-475681.html
ತಮ್ಮ ರಾಜೀನಾಮೆ ಕುರಿತು ಗುಲಾಂ ನಬಿ ಅಜಾದ್ ಸುದೀರ್ಘ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು ಗಾಂಧಿ ಕುಟುಂಬ ಮತ್ತು ಸಂಘಟನಾ ನಾಯಕತ್ವದ ವಿರುದ್ಧ ಹರಿಹಾಯ್ದಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕರನ್ನು ಮೂಲೆ ಗುಂಪು ಮಾಡಿರುವುದು ಮತ್ತು ‘ಅನನುಭವಿ ಭಟ್ಟಂಗಿಗಳ ಗುಂಪಿನ’ ಒಡನಾಟವನ್ನು ಹೆಚ್ಚಿಸಿಕೊಂಡಿರುವುದು ತಮ್ಮ ನಿರ್ಗಮನ ನಿರ್ಧಾರಕ್ಕೆ ಕಾರಣ ಎಂದು ಹೇಳಿದ್ದಾರೆ.








