ಹೊಸ ಪಕ್ಷ ಸ್ಥಾಪಿಸಲು ಮುಂದಾದ ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್
ಇತ್ತೀಚೆಗಷ್ಟೇ ಪಕ್ಷ ತೊರೆದಿರುವ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಇಂದು ಜಮ್ಮುವಿನಲ್ಲಿ ಮೊದಲರ್ಯಾಲಿಯನ್ನ ಹಮ್ಮಿಕೊಂಡಿದ್ದು, ಸೈನಿಕ ಕಾಲೋನಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಭಾನುವಾರ ಬೆಳಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಸಾರ್ವಜನಿಕ ಸಭೆ ನಡೆಸಲು ಜಮ್ಮುವಿಗೆ ತೆರಳಿದರು.
ಕಾಂಗ್ರೆಸ್ ಜೊತೆಗಿನ ಸುಮಾರು 50 ವರ್ಷಗಳ ಸುದೀರ್ಘ ಒಡನಾಟವನ್ನು ಮುರಿದುಕೊಂಡ ನಂತರ ಇದು ಅವರ ಮೊದಲ ಸಭೆಯಾಗಿದೆ. ಶೀಘ್ರದಲ್ಲೇ ಹೊಸ ಪಕ್ಷವನ್ನು ಪ್ರಾರಂಭಿಸುವುದಾಗಿ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಘಟಕವನ್ನು ರಚಿಸುವುದಾಗಿ ಆಜಾದ್ ಹೇಳಿದ್ದಾರೆ. ಆಜಾದ್ ಅವರು 2005 ರಿಂದ 2008 ರವರೆಗೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದರು.
ಆಜಾದ್ ಅವರು ಹೊಸ ಪಕ್ಷವನ್ನಸ್ಥಾಪಿಸುತ್ತಾರೆಸುದ್ದಿಯನಂತರಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ನಾಯಕರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 64 ನಾಯಕರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.