ಆನೇಕಲ್: ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್ ನಿಂದಾಗಿ (Electric Shock) ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
11 ವರ್ಷದ ಬಾಲಕಿ ಸಾವನ್ನಪ್ಪಿದ್ದಾರೆ. ಈ ಘಟನೆ ಆನೇಕಲ್ (Anekal) ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಸಾವನ್ನಪ್ಪಿದ ಬಾಲಕಿ. ತನಿಷ್ಕಾ ಮನೆಯ ಬಳಿ ಆಟವಾಡುತ್ತ ವಿದ್ಯುತ್ ಕಂಬದ ಬಳಿ ಹೋಗಿದ್ದಾಳೆ. ಈ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಗಾಯಗೊಂಡಿದ್ದ ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಸ್ಕಾಂ ಅಧಿಕಾರಿಗಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.