ದಾವಣಗೆರೆ: ಕೃಷಿ ಹೊಂಡಕ್ಕೆ (Agricultural Pond) ಬಿದ್ದ ಪರಿಣಾಮ ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಜಗಳೂರಿನ (Jagalur) ಅಸಗೋಡು ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ.
ಈ ಸಂದರ್ಭದಲ್ಲಿ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿಯರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)

![technologies-aerospace-defense-manufacturing-unit-devanahalli]](https://saakshatv.com/wp-content/uploads/2026/10/areo-350x247.png)
