ಬೆಂಗಳೂರು : ಡ್ರಗ್ ಮಾಫಿಯಾ ವಿಚಾರವಾಗಿ ಸಿಸಿಬಿ ನೋಟಿಸ್ ನೀಡಿರುವ ಕುರಿತು ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದು, ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು ನಿಜ ಎಂದಿದ್ದಾರೆ.
ನೋಟಿಸ್ ನೀಡಿರುವ ವಿಚಾರವಾಗಿ ಟ್ವೀಟ್ ಮಾಡಿರುವ ರಾಗಿಣಿ, ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು ನಿಜ. ಕಡಿಮೆ ಅವಧಿಯಲ್ಲಿ ನೋಟಿಸ್ ನೀಡಿದ ಹಿನ್ನೆಲೆ ಇಂದು ನಾನು ವಿಚಾರಣೆಗೆ ಹಾಜರಾಗುತ್ತಿಲ್ಲ. ನೋಟಿಸ್ ಕೊಟ್ಟ ಬಗ್ಗೆ ನನ್ನ ಪರವಾಗಿ ಕಾಳಜಿ ವ್ಯಕ್ತಪಡಿಸಿದ ಜನತೆಗೆ ಧನ್ಯವಾದಗಳು. ನಮ್ಮ ವಕೀಲರು ಪೊಲೀಸರು ಮುಂದೆ ಹಾಜರಾಗಿ ನಮ್ಮ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಸಮಯದ ಅಭಾವ ಹಿನ್ನೆಲೆ ಸೋಮವಾರ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಪೊಲೀಸರ ನೀಡಿರುವ ನೋಟಿಸ್ ಪ್ರಕಾರ ವಿಚಾರಣೆಯಲ್ಲಿ ಭಾಗಿಯಾಗೋದು ಒಬ್ಬ ಪ್ರಜೆಯಾಗಿ ನನ್ನ ಕರ್ತವ್ಯ. ಪೊಲೀಸರಿಂದ ಮರೆ ಮಾಡುವ ವಿಷಯಗಳಿಲ್ಲ. ಕಾನೂನು ಬಾಹಿರ ಚಟುವಟಿಕೆಗಳಿಗೂ ನನಗೂ ಸಂಬಂಧವಿಲ್ಲ. ನನ್ನ ಬಗ್ಗೆ ಕಾಳಜಿ ತೋರಿಸಿದ ಜನತೆ ಕೃತಜ್ಞತೆ ಎಂದು ರಾಗಿಣಿ ತಿಳಿಸಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








