Glenn Maxwell : ಡೆಲ್ಲಿ ಸೋಲಿಗೆ ಮ್ಯಾಕ್ಸಿ ಪ್ರಾರ್ಥನೆ
ಐಪಿಎಲ್-2022 ರಲ್ಲಿ ಮುಂಬೈ ಇಂಡಿಯನ್ಸ್ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆಲ್ಲಲೇಬೇಕು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹೇಳಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಜೊತೆಗಿನ ಪಂದ್ಯದಲ್ಲಿ ಮುಂಬೈ ಗೆಲ್ಲಬೇಕೆಂದು ಅವರು ಬಯಸಿದ್ದಾರೆ. ಗುರುವಾರದ ಮೇ 19 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಗೆಲುವಿನೊಂದಿಗೆ, RCB ತನ್ನ ಪ್ಲೇ-ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ಮ್ಯಾಕ್ಸಿ 4 ಓವರ್‌ಗಳಲ್ಲಿ 28 ರನ್ ನೀಡಿ ಒಂದು ವಿಕೆಟ್ ಪಡೆದರು. ಬ್ಯಾಟಿಂಗ್ ನಲ್ಲಿ ಒನ್ ಡೌನ್ ನಲ್ಲಿ ಬಂದ ಮ್ಯಾಕ್ಸ್ ವೆಲ್ 18 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 40 ರನ್ ಗಳಿಸಿ ಅಜೇಯರಾಗುಳಿದರು. ಹೀಗಾಗಿ ಆರ್‌ಸಿಬಿ ಗೆಲುವಿನಲ್ಲಿ ಮ್ಯಾಕ್ಸಿ ಪ್ರಮುಖ ಪಾತ್ರ ವಹಿಸಿದರು.
ಈ ಪಂದ್ಯದ ಗೆಲುವಿನೊಂದಿಗೆ ಆರ್‌ಸಿಬಿ ಒಟ್ಟು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ತಲುಪಿದೆ. ಪ್ಲೇ ಆಫ್ ರೇಸ್‌ನಲ್ಲಿ ಬೆಂಗಳೂರು ವಿರುದ್ಧ ತೀವ್ರ ಪೈಪೋಟಿ ನಡೆಸುತ್ತಿರುವ ಡೆಲ್ಲಿ ತನ್ನ ಅಂತಿಮ ಪಂದ್ಯದಲ್ಲಿ ಮುಂಬೈ ತಂಡವನ್ನು ಎದುರಿಸಲಿದೆ. ಪಂತ್ ಸೇನೆ ಸೋತರೆ ಆರ್‌ಸಿಬಿ ಪ್ಲೇ ಆಫ್ಸ್ ಆಡಲಿದೆ.
ಈ ಹಿನ್ನೆಲೆಯಲ್ಲಿ ಮಾತನಾಡಿರುವ ಗ್ಲೆನ್ ಮ್ಯಾಕ್ಸ್‌ವೆಲ್, “ನಾವು ಕೋಲ್ಕತ್ತಾಗೆ ಹೋಗುತ್ತಿದ್ದೇವೆ ಮತ್ತು ನಂತರ ನಾವು ಫೈನಲ್‌ನಲ್ಲಿ ಆಡಲು ತುಂಬಾ ಎದುರು ನೋಡುತ್ತಿದ್ದೇವೆ. ಆದ್ದರಿಂದ ಪ್ರಶಸ್ತಿ ಗೆಲ್ಲುವ ಅವಕಾಶವಿದೆ ಎಂದು ನಾವು ಭಾವಿಸುತ್ತೇವೆ. ಇದೆಲ್ಲ ಆಗಬೇಕು ಅಂದರೆ ಮುಂಬೈ ದೆಹಲಿಯನ್ನು ಸೋಲಿಸಬೇಕು. ಪಂತ್ ಸೇನೆ ಸೋಲಬೇಕು ಎಂದು ಹೇಳಿದ್ದಾರೆ.glenn-maxwell-hopes-mi-can-defeat-delhi