ವೀರೇಂದ್ರ ಸೆಹ್ವಾಗ್…ಟೀಮ್ ಇಂಡಿಯಾದ ಮಾಜಿ ಆಟಗಾರ. ಹೊಡಿ ಬಡಿ ಆಟದ ಮೂಲಕವೇ ಸೆಹ್ವಾಗ್ ವಿಶ್ವ ಕ್ರಿಕೆಟ್ ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದರು.
ಕ್ರಿಕೆಟ್ ಗೆ ನಿವೃತ್ತಿಯಾದ ನಂತರ ಸೆಹ್ವಾಗ್ ತನ್ನ ಆಟದಂತೆ ನೇರ ನಡೆ ನುಡಿಗಳ ಮೂಲಕವೇ ಗಮನ ಸೆಳೆಯುತ್ತಿದ್ದಾರೆ.
ಮನಸ್ಸಿನಲ್ಲಿ ಏನು ಇದೆಯೋ ಅದನ್ನು ನೇರವಾಗಿ ಹೇಳುವ ವ್ಯಕ್ತಿತ್ವ ಸೆಹ್ವಾಗ್ ಅವರದ್ದು. ಇದೀಗ ಸೆಹ್ವಾಗ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ಹೌದು, ವೀರೇಂದ್ರ ಸೆಹ್ವಾಗ್ ಈ ಬಾರಿ ತರಾಟೆಗೆ ತೆಗೆದುಕೊಂಡಿದ್ದು ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್.
ಗ್ಲೇನ್ ಮ್ಯಾಕ್ಸ್ ವೆಲ್ ಇತ್ತೀಚಿಗೆ ಮುಕ್ತಾಯವಾದ ಟೀಮ್ ಇಂಡಿಯಾ ವಿರುದ್ಧದ ಏಕದಿನ ಮತ್ತು ಟಿ-ಟ್ವೆಂಟಿಯಲ್ಲಿ ಆಡಿದ ರೀತಿ ಹೇಗಿತ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ.
ಅದೇ ಗ್ಲೇನ್ ಮ್ಯಾಕ್ಸ್ ವೆಲ್ ಕಳೆದ ತಿಂಗಳು ಮುಕ್ತಾಯವಾದ ಐಪಿಎಲ್ ನಲ್ಲಿ ಯಾವ ರೀತಿ ಕೆಟ್ಟ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು ಎಂಬುದು ಸಹ ಗೊತ್ತಿರುವ ಸಂಗತಿಯೇ.
ಆದ್ರೆ ಸೆಹ್ವಾಗ್ ಈಗ ಗ್ಲೇನ್ ಮ್ಯಾಕ್ಸ್ ವೆಲ್ ಅವರ ಬದ್ಧತೆಯನ್ನೇ ಪ್ರಶ್ನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ್ದ ಗ್ಲೇನ್ ಮ್ಯಾಕ್ಸ್ ವೆಲ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಯಾಕೆ ಕಳಪೆ ಪ್ರದರ್ಶನ ನೀಡಿರುವುದು ಅನ್ನೋದು ಸೆಹ್ವಾಗ್ ಪ್ರಶ್ನೆಯಾಗಿದೆ.
ಅಷ್ಟೇ ಅಲ್ಲ, ಸೆಹ್ವಾಗ್, ಗ್ಲೇನ್ ಮ್ಯಾಕ್ಸ್ ವೆಲ್ ಅವರ ವ್ಯಕ್ತಿತ್ವವನ್ನು ಕೂಡ ಪ್ರಶ್ನೆ ಮಾಡಿದ್ದಾರೆ. ಕಿಂಗ್ ಇಲೆವೆನ್ ಪಂಜಾಬ್ ತಂಡದ ಕೋಚ್ ಕೂಡ ಆಗಿದ್ದ ಸೆಹ್ವಾಗ್, ಮ್ಯಾಕ್ಸ್ ವೆಲ್ ಮಾಡುತ್ತಿದ್ದ ಕಿತಾಪತಿಗಳನ್ನು ಕೂಡ ಬಹಿರಂಗಪಡಿಸಿದ್ದಾರೆ.
ಐಪಿಎಲ್ ನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಆಡಿರುವ 13 ಪಂದ್ಯಗಳಲ್ಲಿ ಗಳಿಸಿದ್ದು 108 ರನ್. ಇದ್ರಲ್ಲಿ ಒಂದೇ ಒಂದು ಸಿಕ್ಸರ್ ಇರಲಿಲ್ಲ. ಅಷ್ಟೇ ಅಲ್ಲ ಕೇವಲ 9 ಬೌಂಡರಿಗಳನ್ನು ಮಾತ್ರ ಸಿಡಿಸಿದ್ದಾರೆ.
ಆದ್ರೆ ಟೀಮ್ ಇಂಡಿಯಾದ ವಿರುದ್ಧ ಗ್ಲೇನ್ ಮ್ಯಾಕ್ಸ್ ವೆಲ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.
ಮೊದಲ ಪಂದ್ಯದಲ್ಲಿ 19 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ಸಹಾಯದಿಂದ 45 ರನ್ ಗಳಿಸಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ 29 ಎಸೆತಗಳಲ್ಲಿ ತಲಾ ನಾಲ್ಕು ಸಿಕ್ಸರ್ ಮತ್ತು ಬೌಂಡರಿಗಳ ನೆರವಿನಿಂದ 73 ರನ್ ದಾಖಲಿಸಿದ್ದರು. ಮೂರನೇ ಏಕದಿನ ಪಂದ್ಯದಲ್ಲೂ ಬಿರುಸಿನನ 59 ರನ್ ದಾಖಲಿಸಿದ್ದರು. ಇನ್ನು ಟಿ-ಟ್ವೆಂಟಿ ಪಂದ್ಯಗಳಲ್ಲಿ 78 ರನ್ ಪೇರಿಸಿದ್ದರು.
ಇದನ್ನೇ ಪ್ರಶ್ನೆ ಮಾಡಿದ್ದ ಸೆಹ್ವಾಗ್, ಐಪಿಎಲ್ ನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಎಂಜಾಯ್ ಮಾಡುತ್ತಿದ್ದ. ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ರಿಸ್ಕ್ ಅಥವಾ ಒತ್ತಡವನ್ನು ತೆಗೆದುಕೊಳ್ಳುತ್ತಿರಲಿಲ್ಲ. ಆಟಗಾರರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ರೂ ರನ್ ಮಾತ್ರ ದಾಖಲಿಸುತ್ತಿರಲಿಲ್ಲ ಎಂದು ಸೆಹ್ವಾಗ್ ಮ್ಯಾಕ್ಸ್ ವೆಲ್ ವಿರುದ್ಧ ಆರೋಪ ಮಾಡಿದ್ದಾರೆ.
ಅಷ್ಟೇ ಅಲ್ಲ, ಆಟದ ಮುಗಿದ ನಂತರ ಉಚಿತವಾಗಿ ಸಿಗುತ್ತಿದ್ದ ಡ್ರಿಂಕ್ಸ್ ತೆಗೆದುಕೊಳ್ಳುತ್ತಿದ್ದ. ಜೊತೆಗೆ ರೂಮ್ ಗೆ ತೆಗೆದುಕೊಂಡು ಹೋಗಿ ಕುಡಿಯುತ್ತಿದ್ದ. ಇದು ಐಪಿಎಲ್ ನಲ್ಲಿ ಗ್ಲೇಮ್ ಮ್ಯಾಕ್ಸ್ ವೆಲ್ ಅವರ ಕಾಯಕವಾಗಿತ್ತು ಅಂತ ಸೆಹ್ವಾಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಸೆಹ್ವಾಗ್ ಗ್ಲೇನ್ ಮ್ಯಾಕ್ಸ್ ವೆಲ್ ಆಟವನ್ನೇ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿಯಲ್ಲಿ ಬಿರುಕು: ಅತೃಪ್ತ ನಾಯಕರ ‘ಬಣ’ ಕದನ
ಕರ್ನಾಟಕದ ಬಿಜೆಪಿ ಘಟಕದಲ್ಲಿ ಬಣ ರಾಜಕೀಯ ಮತ್ತೆ ಮುಂದುವರೆದಿದೆ. ಪಕ್ಷದೊಳಗಿನ ಅತೃಪ್ತ ನಾಯಕರು ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ ನಿವಾಸದಲ್ಲಿ ಸಭೆ ಸೇರಿದ್ದು, ಈ ಸಭೆ ಹಲವು...