ವಿನಿ ರಾಮನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮ್ಯಾಕ್ಸ್ ವೆಲ್
ಆಸ್ಟ್ರೇಲಿಯಾ ತಂಡದ ಸ್ಪೋಟಕ ಬ್ಯಾಟ್ಸಮನ್ ಗ್ಲೆನ್ ಮ್ಯಾಕ್ಸ್‌ವೆಲ್, ತಮಿಳುನಾಡು ಮೂಲದ ಚೆನ್ನೈ ಯುವತಿ ವಿನಿ ರಾಮನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಮ್ಯಾಕ್ಸ ವೆಲ್ ಭಾರತದ ಅಳಿಯನಾಗಿ ಇನ್ನಷ್ಟು ಹತ್ತಿರವಾಗಿದ್ದಾನೆ. ಈ ಜೋಡಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಮದುವೆ ಸಂತಸದ ಕ್ಷಣಗಳನ್ನ ಹಂಚಿಕೊಂಡಿದ್ದಾರೆ.
https://www.instagram.com/p/CbRZdServhU/?utm_source=ig_embed&ig_rid=b81b12c8-ce8a-4380-a66c-3cd86ac0fd06
ಭಾರತದ ನೆಲದಲ್ಲಿಯೇ ಗ್ಲೆನ್ ಮ್ಯಾಕ್ಸ್‌ವೆಲ್ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಹಲವು ವರ್ಷಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುತ್ತಿರುವ ಗ್ಲೆನ್ ಮ್ಯಾಕ್ಸ್‌ವೆಲ್, ತಮ್ಮ ಸ್ಪೋಟಕ ಬ್ಯಾಟಿಂಗ್‌ನಿಂದ ಸಾಕಷ್ಟು ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ಇದೀಗ ಚೆನ್ನೈ ಮೂಲದ ಯವತಿಯೊಂದಿಗೆ ವಿವಾಹವಾಗುವ ಮೂಲಕ ಭಾರತದ ಜೊತೆಗಿನ ಅವರ ಸಂಬಂಧ ಇನ್ನಷ್ಟು ಗಟ್ಟಿಯಾಗಿದೆ.
ಮ್ಯಾಕ್ಸವೆಲ್ ಮತ್ತು ವಿನಿ ರಾಮನ್ 2020 ರ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಈ ಜೋಡಿಯ ತಮಿಳು ಭಾಷೆಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು.