ಬೆಂಗಳೂರು : ವ್ಯಕ್ತಿಯೊಬ್ಬ ಬೈಕ್ ನ ಸ್ಪೀಡ್ ತೋರಿಸಲು ಹೋಗಿ ಹೆಣವಾಗಿ ಹೋಗಿರುವ ಘಟನೆಯೊಂದು ನಡೆದಿದೆ.
24 ಲಕ್ಷ ರೂ. ಮೌಲ್ಯದ ಬೈಕ್ ಕಾರಿಗೆ ಡಿಕ್ಕಿ ಹೊಡೆದ (Bike Accident) ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಘಟನೆ ಜಯನಗರದ ಅಶೋಕ ಪಿಲ್ಲರ್ ಬಳಿ ತಡರಾತ್ರಿ ನಡೆದಿದೆ.
ಬೈಕ್ ಸವಾರ ಶೇಕ್ ನಾಸಿರ್ (32) ಸಾವನ್ನಪ್ಪಿರುವ ವ್ಯಕ್ತಿ ಎನ್ನಲಾಗಿದೆ. ಘಟನೆಯಲ್ಲಿ ಹಿಂಬದಿ ಇದ್ದ ಸೈಯದ್ ಮುದಾಸಿರ್ ಗಾಯಗೊಂಡಿದ್ದಾರೆ. ಬೈಕ್ ಸವಾರ ದುಬಾರಿ ಬೆಲೆಯ ಬೈಕ್ ಚಲಾಯಿಸುತ್ತಿದ್ದ. ಈ ವೇಳೆ ವ್ಹೀಲಿಂಗ್ ಮಾಡುತ್ತಾ ವೇಗವಾಗಿ ಬಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ಬೈಕ್ ಸವಾರರು ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಕುತ್ತಿಗೆಗೆ ತೀವ್ರ ಏಟು ಬಿದ್ದ ಕಾರಣ ಸ್ಥಳದಲ್ಲೇ ನಾಸಿರ್ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.