‘ಗೋ ಬ್ಯಾಕ್’ ಬಿ.ಸಿ ನಾಗೇಶ | ಸಿಎಫ್ಐ ಸಂಘಟನೆಯ ಕಾರ್ಯಕರ್ತ ಪ್ರತಿಭಟನೆ
ಮಂಗಳೂರು: ನಗರಕ್ಕೆ ಆಗಮಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸಿಎಫ್ಐ ಸಂಘಟನೆಯ ಕಾರ್ಯಕರ್ತರು ‘ಗೋ ಬ್ಯಾಕ್’ ಘೋಷಣೆ ಕೂಗಿದ್ದಾರೆ.
ಮಂಗಳೂರು ನಗರದ ಹಂಪನಕಟ್ಟೆ ಬಳಿ 4.80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಚಿವರು ಆಗಮೀಸಿದ್ದರು. ಈ ವೇಳೆ ಸಿಎಫ್ಐ ಸಂಘಟನೆಯ ಕಾರ್ಯಕರ್ತರು ‘ಗೋ ಬ್ಯಾಕ್’ ಘೋಷಣೆ ಕೂಗಿದ್ದು, ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ್ದಾರೆ.
ಈ ವೇಳೆ ರಸ್ತೆಯಲ್ಲೇ ಪೊಲೀಸರು ತಡೆದಿದ್ದಾರೆ. ಸಮವಸ್ತ್ರ ಹಂಚಿಕೆಯಲ್ಲಿ ಸಚಿವರಿಂದ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿ ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಯತ್ನಿಸಿದ್ದಾರೆ. ಆಗ ಕೆಲವು ಸಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಮಂಗಳೂರು ಪುರಭವನದ ಆವರಣದಲ್ಲಿ ಕೂಡಿ ಹಾಕಿದ್ದಾರೆ.