ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎರಡುದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು ಇಂದು ಅಹ್ಮದಾಬಾದ್ ಗೆ ಪತ್ನಿ ಜತೆ ಆಗಮಿಸಲಿದ್ದಾರೆ. ಟ್ರಂಪ್ ಅವರನ್ನ ಸ್ವಾಗತಿಸಲು ಭಾರತ ಸಕಲ ರೀತಿಯಲ್ಲೂ ಸಿದ್ಧತೆಗಳನ್ನು ನಡೆಸಿದೆ. ಈ ಮಧ್ಯೆ ಟ್ವಿಟ್ಟರ್ ನಲ್ಲಿ ಗೋ ಬ್ಯಾಕ್ ಟ್ರಂಪ್ ಟ್ರೆಂಡಿಂಗ್ ನಲ್ಲಿದೆ. ನೆಟ್ಟಿಗರು ಗೋ ಬ್ಯಾಕ್ ಟ್ರಂಪ್ ಎಂದು ಟ್ವೀಟ್ ಮಾಡುತ್ತಿದ್ದಾರೆ.
ಭಾರತಕ್ಕೆ ಆಗಮಿಸುವ ಟ್ರಂಪ್ ಮೊದಲಿಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಯ ನಂತರ ಮೋಟೆರಾ ಸ್ಟೇಡಿಯಂನಲ್ಲಿ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.









