ಬೆಂಗಳೂರು: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಬಸ್ ಫ್ಲೈ ಓವರ್ ಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಈ ಘಟನೆ ಸಿಲಿಕಾನ್ ಸಿಟಿಯ ಮಾದವರ ನೈಸ್ ರಸ್ತೆಯ BIEC ಮೈದಾನದ ಹತ್ತಿರ ನಡೆದಿದೆ. ಬೆಂಗಳೂರಿನಿಂದ ಸೋಮವಾರಪೇಟೆಗೆ (Bengaluru To Somavarpete) ಈ ಬಸ್ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಬೈಕ್ ಸವಾರ ಅಡ್ಡ ಬಂದಿದ್ದಾನೆ. ಇದನ್ನು ನೋಡಿದ ಚಾಲಕ, ಆತನನ್ನು ರಕ್ಷಿಸಲು ಹೋಗಿ ಅವಘಡಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಫ್ಲೈಓವರ್ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ.
ಘಟನೆಯಲ್ಲಿ ದೊಡ್ಡ ಭಾರೀ ಅನಾಹುತ ತಪ್ಪಿದಂತಾಗಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ದುರಂತವೊಂದು ತಪ್ಪಿದಂತಾಗಿದೆ.
ಘಟನೆಯಲ್ಲಿ ನಾಲ್ವರು ಗಂಭೀರವಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.