ಗೋವಾದಲ್ಲಿ ಭಾರೀ ಮಳೆ – ನೆರೆ ಭೀತಿ, ಮನೆಗಳು ಜಲಾವೃತ , ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಗೋವಾ : ಗೋವಾದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳೆಲ್ಲವೂ ಕೆರೆಯಂತಾಗಿದ್ದು ಪ್ರವಾಹದ ಪರಿಸ್ಥಿತಿ ಎದುರಾಗಿದೆ..
ನದಿಗಳಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಗೋವಾದ ಸತ್ತಾರಿ ಮತ್ತು ಬಿಚೊಲಿಂ ತಹಸೀಲ್ ಮತ್ತು ದಕ್ಷಿಣ ಗೋವಾದ ದರ್ಭಾಂದೋರಾ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ.
ಭಾರಿ ಮಳೆಯ ಕಾರಣ ಮಹದಾಯಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸತ್ತಾರಿ ತಹಸೀಲ್ನಲ್ಲಿ ಗುರುವಾರ ರಾತ್ರಿಯಿಂದ ನೂರಕ್ಕೂ ಹೆಚ್ಚು ಮನೆಗಳಲ್ಲಿ ನೀರು ತುಂಬಿಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನೂ ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಆದರೆ, ಸದ್ಯದ ಮಳೆಯ ಪರಿಸ್ಥಿತಿಯನ್ನು ಗಮನಸಿದರೆ, ಪ್ರವಾಹ ಉಂಟಾಗುವ ಸಾಧ್ಯತೆ ಹೆಚಾಗಿದೆ. ಜಲಾವೃತಗೊಂಡಿರುವ ಮನೆಗಳಲ್ಲಿದ್ದ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.