ಗೋವಾ : ಕೇಂದ್ರ ಸರ್ಕಾರದ ಅನ್ ಲಾಕ್ 4.0 ಮಾರ್ಗಸೂಚಿ ಅಡಿ ಸೆ. 1ರಿಂದ ಗೋವಾ ರಾಜ್ಯ ಪ್ರವೇಶಕ್ಕಿದ್ದ ಎಲ್ಲ ನಿರ್ಬಂಧವನ್ನು ತೆಗೆದುಹಾಕಲಾಗಿದೆ. 6 ತಿಂಗಳ ನಂತರ ಇದೀಗ ಗೋವಾ ಗಡಿ ತೆರವುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಗೋವಾಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ವಾಹನಗಳ ಸಂಖ್ಯೆಯೂ ಹೆಚ್ಚಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಇತ್ತ ಬೀಚ್ಗಳಿಗಷ್ಟೇ ಅಲ್ಲದೇ ಬಾರ್ ಮತ್ತು ರೆಸ್ಟೊರೆಂಟ್ಗಳನ್ನು ತೆರೆಯಲು ಸಹ ಅನುಮತಿ ನೀಡಲಾಗಿದೆ. ಹೀಗಾಗಿ ದೇಸಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಗೋವಾಗೆ ಆಗಮಿಸುತ್ತಿದ್ದಾರೆ.








