ಬೆಂಗಳೂರು: ಅಪ್ರಾಪ್ತ ಬಾಲಕನಿಂದ 12.46 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ ನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ತಾನು ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ ಎರಡು ಚಿನ್ನದ ಬಿಸ್ಕತ್‌ಗಳನ್ನು ಕದ್ದೊಯ್ದಿದ್ದ ಅಪ್ರಾಪ್ತನನ್ನು ಇಲ್ಲಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಚಿನ್ನದ ಬಿಸ್ಕೆಟ್ ಕದ್ದು ಬಾಲಕ ಬೆಂಗಳೂರು ಬಿಟ್ಟು ಹೋಗಲು ಪ್ರಯತ್ನಿಸುತ್ತಿದ್ದ ವೇಳೆಯೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಬಾಲಕ ತನ್ನ ಪಾದರಕ್ಷೆಗಳಲ್ಲಿ ಬಿಸ್ಕೆಟ್ ಇಟ್ಟುಕೊಂಡು ಹೋಗಲು ಯತ್ನಿಸಿದ್ದಾನೆ.
ಸಿಐಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ದೀಪಕ್ ತನ್ವರ್ ನೀಡಿದ ದೂರಿನ ಮೇರೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.