ಟೆಸ್ಟ್ ಕ್ರಿಕೆಟ್ ಗೆ ಜಡೇಜಾ ಗುಡ್ ಬೈ..? Jadeja saaksha tv
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಶೀಘ್ರದಲ್ಲೇ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕದಿನ ಮತ್ತು ಟಿ 20 ಮಾದರಿ ಕ್ರಿಕೆಟ್ ಗಳತ್ತ ಗಮನ ಹರಿಸುವ ನಿಟ್ಟಿನಲ್ಲಿ ಜಡೇಜಾ ಟೆಸ್ಟ್ ಕ್ರಿಕೆಟ್ ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ವತಃ ಜಡೇಜಾ ಸಹ ಆಟಗಾರರೊಬ್ಬರು ದೈನಿಕ್ ಜಾಗರಣ್ ಗೆ ತಿಳಿಸಿದ್ದಾರೆ.
ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ನಲ್ಲಿ ಜಡೇಜಾ ಗಾಯಗೊಂಡಿದ್ದರು. ಹೀಗಾಗಿ ಅವರು ಮುಂಬೈ ನಲ್ಲಿ ನಡೆದ ಟೆಸ್ಟ್ ಪಂದ್ಯದಿಂದ ದೂರ ಉಳಿದಿದ್ದರು. ಮೊಣಕಾಲಿನ ನೋವಿನಿಂದ ಬಳಲುತ್ತಿರುವ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳಲು ಸುಮಾರು ಆರು ತಿಂಗಳುಗಳಲಾಗಲಿವೆ. ಹೀಗಾಗಿ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಜಡೇಜಾ ಹೊರಗುಳಿದಿದ್ದಾರೆ.
ಇನ್ನು ಸರ್ ಜಡೇಜಾ ಭಾರತ ತಂಡದ ಖಾಯಂ ಆಟಗಾರರಾಗಿದ್ದಾರೆ. ಟಿ 20, ಏಕದಿನ, ಟೆಸ್ಟ್ ಹೀಗೆ ಮೂರು ಮಾದರಿ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಟ್ರಂಪ್ ಕಾರ್ಡ್ ಆಗಿದ್ದಾರೆ.
ಟೀಂ ಇಂಡಿಯಾ ಪರ 57 ಟೆಸ್ಟ್ ಪಂದ್ಯಗಳನ್ನಾಡಿರುವ ಜಡೇಜಾ 232 ವಿಕೆಟ್ ಪಡೆದು 2195 ರನ್ ಗಳಿಸಿದ್ದಾರೆ. ಆದ್ರೆ ಇದೀಗ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಟೆಸ್ಟ್ ಕ್ರಿಕೆಟ್ ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಅಂದಹಾಗೆ ಟೀಂ ಇಂಡಿಯಾದ ಮತ್ತೊಬ್ಬ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ ಅನ್ನೋ ಸುದ್ದಿ ಕೂಡ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.









