ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ ಎಂಬ ಅನುಮಾನ ವ್ಯಕ್ತವಾಗಿದೆ.
ನಿಖಿಲ್ ಕುಮಾರಸ್ವಾಮಿ ಅವರ ಟ್ವಿಟರ್ ಪ್ರೊಫೈಲ್ ಬದಲಿಸಲಾಗಿದ್ದು, ಜೆಡಿಎಸ್ ಯೂತ್ ಪ್ರೆಸಿಡೆಂಟ್ ಪದವನ್ನು ಡಿಲೀಟ್ ಮಾಡಿದ್ದಾರೆ. ಆ ಜಾಗದಲ್ಲಿ ಕೃಷಿಕ(ಫಾರ್ಮರ್) ಎಂದು ಬದಲಾವಣೆ ಮಾಡಲಾಗಿದೆ.

ನಿಖಿಲ್ ಕುಮಾರಸ್ವಾಮಿ ಅವರು ದಿಢೀರ್ ತಮ್ಮ ಪ್ರೊಫೈಲ್ ಬದಲಾವಣೆ ಮಾಡಿದ್ದೇಕೆ ಎಂಬ ಪ್ರಶ್ನೆ ಎದುರಾಗಿದೆ.
ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ ಮಾಡಿದ್ದ ನಿಖಿಲ್ ಕುಮಾರಸ್ವಾಮಿ ಸೋತು ಸುಣ್ಣವಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಶಾಸಕ ಮುನಿರತ್ನಗೆ ಶುಭ ಕೋರಿದ್ದ ನಿಖಿಲ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಆಕ್ರೋಶಕ್ಕೆ ಮನನೊಂದು ನಿಖಿಲ್ ಟ್ವಿಟರ್ ಪ್ರೊಫೈಲ್ ಬದಲಾವಣೆ ಮಾಡಿದ್ದಾರಾ..? ರಾಜಕಾರಣಕ್ಕೆ ನಿಖಿಲ್ ಗುಡ್‍ಬೈ ಹೇಳ್ತಾರಾ..? ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆ ಜೆಡಿಎಸ್ ಕಾರ್ಯಕರ್ತರನ್ನು ಕಾಡುತ್ತಿದೆ.








