ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ (Ayushman Bharat) ಯೋಜನೆಯಡಿ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರಿಗೂ ಆರೋಗ್ಯ ರಕ್ಷಣೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದ್ದು, ಇಡೀ ದೇಶವೇ ಸಂತಸ ಪಡುವಂತಾಗಿದೆ.
ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಆರು ಕೋಟಿ ಹಿರಿಯ ನಾಗರಿಕರಿಗೆ (Senior Citizen) ಪ್ರಯೋಜನವಾಗಲಿದೆ. ಉಚಿತ ಸೌಲಭ್ಯ 5 ಲಕ್ಷ ರೂ ಮೌಲ್ಯದ್ದಾಗಿದೆ. ಈ ಅನುಮೋದನೆಯೊಂದಿಗೆ, 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರು ಅವರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆಯೇ AB PM-JAY ಪ್ರಯೋಜನಗಳನ್ನು ಪಡೆಯಬಹುದು. ಅರ್ಹ ಹಿರಿಯ ನಾಗರಿಕರಿಗೆ AB PM- ಅಡಿಯಲ್ಲಿ ಹೊಸ ವಿಭಿನ್ನ ಕಾರ್ಡ್ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ವಿಮಾ ಯೋಜನೆಯಡಿಯಲ್ಲಿರುವ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಹಿರಿಯ ನಾಗರಿಕರು AB PM-JAY ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಹೇಳಿದೆ.
ದೇಶದಾದ್ಯಂತ ಕೆಲಸ ಮಾಡುತ್ತಿರುವ 37 ಲಕ್ಷ ಆಶಾ ಕಾರ್ಯಕರ್ತೆಯರು, ಎಡಬ್ಲ್ಯೂಡಬ್ಲ್ಯೂಗಳು ಮತ್ತು ಅವರ ಕುಟುಂಬಗಳಿಗೆ ಉಚಿತ ಆರೋಗ್ಯ ಯೋಜನೆಯನ್ನು ವಿಸ್ತರಿಸಲಾಗಿದೆ. AB PM-JAY ವಿಶ್ವದ ಅತಿದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ಖಾತ್ರಿ ಯೋಜನೆಯಾಗಿದ್ದು, 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೌಲಭ್ಯ ನೀಡುವುದಾಗಿ ಮೋದಿ ಇತ್ತೀಚೆಗೆ ಹೇಳಿದ್ದರು. ಸದ್ಯ ಅದರಂತೆ ನಡೆದುಕೊಂಡಿದ್ದಾರೆ.