ಅರ್ಹ ಅಭ್ಯರ್ಥಿಗಳಿಂದ ಸಂದರ್ಶನಕ್ಕೆ ಆಹ್ವಾನ
18 ರಿಂದ 27 ವರ್ಷದೊಳಗಿನವರು ಸಂದರ್ಶನಕ್ಕೆ ಹಾಜರಾಗಬಹುದು
ಏರ್ ಇಂಡಿಯಾದ Air India ಮಹಿಳಾ ಕ್ಯಾಬಿನ್ ಕ್ರ್ಯೂ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೇರ ಸಂದರ್ಶನದ ಮೂಲಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 22 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಬೆಂಗಳೂರಿನಲ್ಲಿ ಉದ್ಯೋಗ ಮಾಡಲು ಸಿದ್ಧರಿದ್ದವರು ಸಂದರ್ಶನಕ್ಕೆ ಹಾಜರಾಗಬಹುದು.
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯು ಕನಿಷ್ಠ 18 ಮತ್ತು ಗರಿಷ್ಠ 27 ವರ್ಷಗಳ ಒಳಗಿರಬೇಕು. ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಸಂದರ್ಶನದಲ್ಲಿ ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ಈ ಸಂದರ್ಶನವು ಐಟಿಸಿ ಫಾರ್ಚೂನ್ ಪಾರ್ಕ್, ಜೆಪಿ ಜೆಪಿ ಸೆಲೆಸ್ಟೀಯಲ್ 5, 43, ರೇಸ್ ಕೋರ್ಟ್ ರಸ್ತೆ, ನಿಯರ್ ಆನಂದರಾವ್ ಸರ್ಕಲ್, ಗಾಂಧಿನಗರ, ಬೆಂಗಳೂರು. ಇಲ್ಲಿ ಇಂದು ನಡೆಯುತ್ತಿದೆ.








