ಅನ್ನಭಾಗ್ಯ ಯೋಜನೆ ಮೂಲಕ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಪಡಿತರ ಚೀಟಿದಾರರ ಖಾತೆಗೆ ಈ ತಿಂಗಳೂ ಹಣ ಜಮಾ ಮಾಡಲಾಗುವುದು ಎನ್ನಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಒಟ್ಟು 170 ರೂ.ಗಳನ್ನು ಫಲಾನುಭವಿಗಳ ಖಾತೆಗೆ ಪಾವತಿಸುವುದನ್ನು ಮುಂದುವರೆಸಿದೆ. ಸೆಪ್ಟೆಂಬರ್ ತಿಂಗಳ ಹೆಚ್ಚುವರಿ ಅಕ್ಕಿ ಬದಲಿಗೆ ಇದುವರೆಗೆ 14 ಜಿಲ್ಲೆಗಳ 41.23 ಲಕ್ಷ ಪಡಿತರ ಚೀಟಿದಾರರಿಗೆ 240 ಕೋಟಿ ರೂ. ಪಾವತಿಸಲಾಗಿದೆ ಎಂದು ತಿಳಿದು ಬಂದಿದೆ ಡಿಬಿಟಿ ಮೂಲಕ ಪಡಿತರ ಚೀಟಿದಾರರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ದಕ್ಷಿಣ ಕನ್ನಡ, ಧಾರವಾಡ, ಮಂಡ್ಯ, ಕಲಬುರಗಿ, ಶಿವಮೊಗ್ಗ ರಾಯಚೂರು, ಉತ್ತರ ಕನ್ನಡ ಹಾಗೂ ರಾಮನಗರ ಜಿಲ್ಲೆಗಳ್ಲಿಲ ಸೆಪ್ಟೆಂಬರ್ ತಿಂಗಳ ಹಣ ಪಾವತಿಸಲಾಗಿದೆ.