ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಬ್ಯಾಗ್ ತೂಕ ನಿಗದಿಗೊಳಿಸಿದ ಸರ್ಕಾರ!
1ರಿಂದ 10ನೇ ತರಗತಿಯವರೆಗೆ ಬ್ಯಾಗ್ ತೂಕ ನಿಗದಿ
1.5 ಕೆಜಿಯಿಂದ 4.5 ಕೆಜಿಯಷ್ಟು ಮಾತ್ರ ವಿದ್ಯಾರ್ಥಿಗಳು ಹೊರಬೇಕು
Good news for school students…
ಬೆಂಗಳೂರು : ಶಾಲಾ ಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್ ಒಂದು ಸಿಕ್ಕಿದ್ದು, ಬ್ಯಾಗ್ ಹೊರೆ (School Bag Weight) ಇಳಿಸುವ ಕುರಿತು ಶಿಕ್ಷಣ ಇಲಾಖೆ (Education Department) ಆದೇಶವೊಂದನ್ನು ಹೊರಡಿಸಿದೆ. 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ಬ್ಯಾಗ್ ತೂಕವನ್ನು ಶಿಕ್ಷಣ ಇಲಾಖೆ ನಿಗದಿ ಮಾಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಆದೇಶ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೂ ಅನ್ವಯಿಸುತ್ತದೆ. ಕಡ್ಡಾಯವಾಗಿ ಎಲ್ಲಾ ಶಾಲೆಗಳು ಈ ನಿಯಮವನ್ನು ಪಾಲನೆ ಮಾಡಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ.
ತರಗತಿ ಮತ್ತು ತೂಕ
1-2ನೇ ತರಗತಿ – 1.5 ರಿಂದ 2 ಕೆಜಿ
3-5ನೇ ತರಗತಿ – 2-3 ಕೆಜಿ
6-8ನೇ ತರಗತಿ – 3-4 ಕೆಜಿ
9-10ನೇ ತರಗತಿ – 4-5 ಕೆಜಿ
ಎನ್‌ಎಲ್‌ಎಸ್‌ಯುಐ, ಸೆಂಟರ್ ಫಾರ್ ಚೈಲ್ಡ್ ಲಾ ಸಹಕಾರದೊಂದಿಗೆ ಅಧ್ಯಯನ ಮಾಡಿದ ಡಿಎಸ್‌ಇಆರ್‌ಟಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವಿದ್ಯಾರ್ಥಿಗಳ ದೇಹದ ತೂಕದ ಶೇ. 10 ರಿಂದ 15ರಷ್ಟು ಶಾಲಾ ಬ್ಯಾಗ್ ತೆಗೆದುಕೊಂಡು ಹೋಗಲು ಶಿಫಾರಸ್ಸು ಮಾಡಿದೆ.