ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಚಿಕ್ಕಬಳ್ಳಾಪುರ: ಉಕ್ರೇನ್ ನಲ್ಲಿ ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದು, ಈ ವಿದ್ಯಾರ್ಥಿಗಳಿ ಶೀರ್ಘದಲ್ಲೆ ಶುಭ ಸುದ್ದಿ ಸಿಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಉಕ್ರೇನ್ ರಿಟರ್ನ್ ವಿದ್ಯಾರ್ಥಿಗಳು ಶೀಘ್ರವೇ ಗುಡ್ ನ್ಯೂಸ್ ಸಿಗುತ್ತೆ. ಈಗಾಗಲೇ ಈ ಕುರಿತು ಕೇಂದ್ರ ಸರ್ಕಾರದ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಈ ಬಗ್ಗೆ ಸಮತಿ ರಚನೆ ಮಾಡಿದ್ದೇವೆ. ಅದಷ್ಟು ಬೇಗ ಶುಭ ಸುದ್ದಿ ಸಿಗಲಿದೆ ಎಂದು ತಿಳಿಸಿದರು.
ಇನ್ನೂ ಕೋವಿಡ್-19 ಕುರಿತು ಮಾತನಾಡಿದ ಅವರು, ಏರ್ಪೋರ್ಟ್ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ಕೋವಿಡ್ ಹೆಚ್ಚಿರುವ 7-8 ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಗಮನ ಹರಿಸಲು ಸೂಚನೆಯನ್ನು ಕೊಡಲಾಗಿದೆ. ಮನೆಗಳಿಗೆ ಹೋದ ಮೇಲೆ ಟೆಲಿಮಾನಿಟಿರಿಂಗ್ ಮಾಡುತ್ತಿದ್ದೇವೆ. ಅವಶ್ಯಕತೆ ಇದ್ರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಿದ್ದೇವೆ ಎಂದು ಹೇಳಿದರು.