ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಿಹಿ ಸುದ್ದಿ ನೀಡಿದ್ದಾರೆ. ಸದ್ಯದಲ್ಲಿಯೇ 13,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ವಿಷಯವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 13,500 ಶಿಕ್ಷಕರ ನೇಮಕಾತಿಯನ್ನು ಸದ್ಯದಲ್ಲಿಯೇ ಮಾಡಲಾಗುವುದು. ನೇಮಕಾತಿ ವಿಚಾರ ಕೋರ್ಟ್ ನಲ್ಲಿ ಇರುವುದರಿಂದ ಶಿಕ್ಷಕರ ನೇಮಕಾತಿ ವಿಳಂಬವಾಗುತ್ತಿದೆ. ಕೋರ್ಟ್ ನಲ್ಲಿ ಇತ್ಯರ್ಥಾವದ ನಂತರ 13,500 ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಹೇಳಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ತುರ್ತಾಗಿ ಪಠ್ಯ ಪುಸ್ತಕದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದ್ದು, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ತಜ್ಞರ ಸಮಿತಿ ಮೂಲಕ ಪೂರ್ಣವಾಗಿ ಪಠ್ಯಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಪಠ್ಯದಲ್ಲಿ ಬದಲಾವಣೆ ಹಿಂದೆ ಯಾವುದೇ ರಾಜಕೀಯ ಉದ್ಧೇಶವಿಲ್ಲ ಎಂದು ಹೇಳಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಸಲಹೆ ಪಡೆದು ಪಠ್ಯಪರಿಷ್ಕರಣೆ ಮಾಡಲಾಗುತ್ತದೆ. ಮಕ್ಕಳಿಗೆ ಉತ್ತಮ ತಿಳುವಳಿಕೆಯ ಪಠ್ಯ ಇರಬೇಕೆಂಬ ಉದ್ಧೇಶದಿಂದ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.