ಇದೇ ತಿಂಗಳ 16ರಿಂದ 27 ರವರೆಗೂ ನಡೆಯಬೇಕಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ರದ್ದುಪಡಡಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನಿಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಲೇ ಇರುವ ಬೆನ್ನಲ್ಲೇ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳನ್ನ ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಹಿಂದೆ ಕಾಲೇಜು ಹಂತದಲ್ಲೇ ಪರೀಕ್ಷೆ ನಿರ್ವಹಿಸಿ ಇದೇ 30ರಂದು ಫಲಿತಾಂಶ ಪ್ರಕಟಿಸುವ ಬಗ್ಗೆ ನಿರ್ಧರಿಸಲಾಗಿತ್ತು. ಸುಮಾರು 60 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗಳನ್ನ ತೆಗೆದುಕೊಳ್ಳಬೇಕಿತ್ತು. ಆದ್ರೆ ಇದೀಗ ಎಲ್ಲಾ ಪರೀಕ್ಷೆಗಳನ್ನೂ ಬರೆದೂ, ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳನ್ನ ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸುವ ಬಗ್ಗೆ ಸಚಿವರು ತಿಳಿಸಿದ್ದಾರೆ.