ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಭರ್ಜರಿ ಗುಡ್ ನ್ಯೂಸ್
ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಿ , ಈ ಮೂಲಕ ವಾಯು ಮಾಲಿನ್ಯ ತಡೆಗಟ್ಟಿ ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 62 ಸಾವಿರ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿಗಳ ಮೂಲಕ ಬೆಂಬಲವನ್ನ ನೀಡಲು ಚಿಂತನೆ ನಡೆಸಿದೆ.
ಇದರ ಜೊತೆಗೆ ದೇಶದಲ್ಲಿ ಎಲೆಕ್ಟ್ರಿಕ್ ಚಾರ್ಜಿಂಗ್ ಸೌಕರ್ಯಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ. ಈ ಎಲ್ಲಾ ಯೋಜನೆಗಾಗಿ ಕೇಂದ್ರ ಸರ್ಕಾರ ಒಟ್ಟು 10 ಸಾವಿರ ಕೋಟಿ ರೂಪಾಯಿಗಳ ಹಣವನ್ನ ಮೀಸಲಿಟ್ಟಿದೆ.
ಇನ್ಮುಂದೆ ನಿಮ್ಮ ವಿಮಾ ಖಾತೆಗಳು ಸೇಫ್ ಆಗಿರಲಿವೆ : ಹೇಗಂತೀರಾ…!
ಸಾರ್ವಜನಿಕ ಹಾಗೂ ವೈಯಕ್ತಿಕ ಬಳಕೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಹೀಗಾಗಿ 7000 ಇ ಬಸ್, 5 ಲಕ್ಷ ತ್ರಿಚಕ್ರ ವಾಹನ, 55 ಸಾವಿರ ಇ ನಾಲ್ಕು ಚಕ್ರದ ವಾಹನಗಳು ಹಾಗೂ 10 ಲಕ್ಷ ಇ ಮೊಟಾರ್ ಸೈಕಲ್ಗಳಿಗೆ ಸಬ್ಸಿಡಿ ನೀಡುವ ಉದ್ದೇಶವನ್ನ ಸರ್ಕಾರ ಹೊಂದಿದೆ.
ಡೆಟಾ ಲೀಕ್ | `ಕೂ’ ಆಪ್ ಸುರಕ್ಷಿತವೇ..?
ಅಲ್ದೇ ಎಲೆಕ್ಟ್ರಿಕ್ ವಾಹನ ಬಳಕೆದಾರರಿಗೆ ಚಾರ್ಜ್ ಮಾಡುವ ಆತಂಕವನ್ನ ದೂರ ಮಾಡುವ ಸಲುವಾಗಿ ಹೆಚ್ಚು ಹೆಚ್ಚು ಚಾರ್ಜಿಂಗ್ ವ್ಯವಸ್ಥೆಯನ್ನ ಮಾಡೋದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel