ಮಹಿಳಾ ಪೊಲೀಸರಿಗೆ ಗುಡ್ ನ್ಯೂಸ್ | 8 ಗಂಟೆ ಕೆಲಸ Saaksha Tv
ಮುಂಬೈ: ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿವರ್ಹಿಸುತ್ತಿರುವ ಮಹಿಳಾ ಸಿಬ್ಬಂದಿ ಇನ್ನುಮುಂದೆ ಎಂಟು ಗಂಟೆ ಮಾತ್ರ ಕಾರ್ಯನಿವರ್ಹಿಸುತ್ತಾರೆ ಎಂದು ಪೊಲೀಸ್ ಮಹಾನಿರ್ದೇಶಕ ಸಂಜಯ್ ಪಾಂಡೆ ಸಂಬಂಧಪಟ್ಟ ಸೂಚನೆ ನೀಡಿದ್ದಾರೆ.
ಇಷ್ಟು ದಿನ ಮಹಾರಾಷ್ಟ್ರದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ದಿನದ 12 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದರು. ಇದರಿಂದ ಅವರು ಮಾನಸಿಕ ತೊಂದರೆ ಅನುಭವಿಸುತ್ತಿದ್ದು, ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿತ್ತು. ಹಾಗಾಗಿ ಕುಟುಂಬದಲ್ಲಿ ಮತ್ತು ಕಚೇರಿಯಲ್ಲಿ ಕೆಲಸ ಮಾಡುವ ಅವರ ಮೇಲಿನ ಹೊರೆ, ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.
ಕುಟುಂಬ ಹಾಗೂ ಕರ್ತವ್ಯದ ನಡುವೆ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ಮುಂದೆ 12 ಗಂಟೆಗಳ ಬದಲು ದಿನದ 8 ಗಂಟೆಗಳ ಕಾಲ ಮಾತ್ರ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರು ಸಂಬಂಧಪಟ್ಟ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.