ಮಹಿಳಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ Saaksha Tv
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. 180 ದಿನಗಳ ಶಿಶುಪಾಲನಾ ರಜೆ ಮಂಜೂರು ಮಾಡಿ ಆದೇಶ ಹೊರಡಿಸಿದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ.
ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯರಿಗೆ, ರಾಜ್ಯ ಸರ್ಕಾರದ ಆದೇಶದ ಅನ್ವಯ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳು ಅಂದರೆ 180 ದಿನಗಳ ಶಿಶುಪಾಲನಾ ರಜೆ ನೀಡಲಾಗುತ್ತದೆ.
ರಾಜ್ಯ ನಿಗಮದ ಮಹಿಳಾ ನೌಕರರಿಗೆ ಈ ಕೆಳಕಂಡ ಷರತ್ತುಗಳ ಮೇರೆಗೆ ಇಡಿ ಸೇವಾ ಅವಧಿಯಲ್ಲಿ ಗರಿಷ್ಟ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಸಕ್ರಮ ಪ್ರಾಧಿಕಾರವು ಮಂಜೂರು ಮಾಡತಕ್ಕದ್ದು ಎಂದು ವ್ಯವಸ್ಥಾಪಕ ನಿರ್ದೇಶಕ ಸುತ್ತೋಲೆ ಹೊರಡಿಸಿದ್ದಾರೆ.