ಕಲ್ಯಾಣ ಕರ್ನಾಟಕ ಜನರಿಗೆ ಭರ್ಜರಿ ಗುಡ್ ನ್ಯೂಸ್ : 10 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ..!
ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಇಂದು ಮುಖ್ಯಮಂತ್ರಿಯವರೊಂದಿಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ 2021-22ನೇ ಸಾಲಿನ ಬಜೆಟ್ನಲ್ಲಿ ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರ ಬಳಿ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ರಾಜ್ಯ ಸಾಕ್ಷರತಾ ಅಭಿಯಾನ ಕಾರ್ಯಕ್ರಮದ ಮೂಲಕ 30 ಸಾವಿರ ಅನಕ್ಷರಸ್ಥರಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಸಾಕ್ಷರತಾ ಕಾರ್ಯಕ್ರಮ ರೂಪಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ಹೇಳಿದರು.