ಮಂಗಳೂರು, ಮೇ 27 : ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮವಾಗಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ಕರಾವಳಿಯಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಜತೆಗೆ ಗಾಳಿ ಮತ್ತು ಗುಡುಗು ಕೂಡ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಕರಾವಳಿ ಸೇರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆ, ಕರಾವಳಿಯ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಮುಂದಿನ ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣವಿದ್ದು, ಜೊತೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ನಿರ್ದೇಶಕ ಡಾ. ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.