ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ಸ್ಯಾಲರಿಯೂ ಇಲ್ಲ : GOOGLE
ಅಂತರ್ಜಾಲದ ದೈತ್ಯ ಗೂಗಲ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ಶಾಕ್ ಕೊಟ್ಟಿದೆ.. ಲಸಿಕೆ ಹಾಕಿಸಿಕೊಳ್ಳದೇ ಇದ್ರೆ , ಸಂಬಳ ಕಟ್ ಮಾಡುವ ನಿರ್ಧಾರ ತೆಗೆದುಕೊಂಡಿದೆ..
ಹೌದು , ಕೋವಿಡ್ ರೂಪಾಂತರಿ ಒಮಿಕ್ರಾನ್ ಆತಂಕ ಹೆಚ್ಚಾದ ಬೆನ್ನಲ್ಲೇ ಕೋವಿಡ್ ಲಸಿಕೆಗೆ ಮತ್ತಷ್ಟು ಪ್ರಾತನಿಧ್ಯ ನೀಡಲಾಗ್ತಿದ್ದು, ಕೋವಿಡ್ ನಿಯಮಗಳನ್ನು ಅನುಸರಿಸದ ಹಾಗೂ ಲಸಿಕೆಯನ್ನು ಪಡೆಯದೇ ಇರುವ ಉದ್ಯೋಗಿಗಳಿಗೆ ಗೂಗಲ್ ವೇತನ ನೀಡುವುದನ್ನು ನಿಲ್ಲಿಸಿದೆ. ಅಷ್ಟೇ ಅಲ್ದೇ GOOGLE ಸಂಸ್ಥೆಯು ಉದ್ಯೋಗಿಗಳಿಗೆ ಕೆಲಸದಿಂದ ವಜಾ ಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.
ಡಿಸೆಂಬರ್ 3ರ ಒಳಗಾಗಿ ತಮ್ಮ ಲಸಿಕೆಗಳ ವಿವರವನ್ನು ಸಲ್ಲಿಸ ಬೇಕೆಂಬ ಸೂಚನೆ ನೀಡಿತ್ತು. ಡಿಸೆಂಬರ್ 3ರ ಬಳಿಕವೂ ಯಾವುದೇ ವಿವರಗಳನ್ನು ಸಲ್ಲಿಸದ ಉದ್ಯೋಗಿಗಳನ್ನು ಗೂಗಲ್ ವೈಯಕ್ತಿಕವಾಗಿ ಸಂಪರ್ಕಿಸುವುದೆಂದು ಸೂಚನೆಯಲ್ಲಿ ತಿಳಿಸಿತ್ತು.
ಇದೀಗ ಗೂಗಲ್ ಲಸಿಕೆಯನ್ನು ಪಡೆಯದೇ ಇರುವ ಉದ್ಯೋಗಿಗಳಿಗೆ ಜನವರಿ 18ರ ವರೆಗೆ ಸಮಯಾವಕಾಶ ನೀಡಿದೆ. ಉದ್ಯೋಗಿಗಳು ಲಸಿಕೆಯನ್ನು ಪಡೆಯದೇ ಹೋದಲ್ಲಿ ಅವರಿಗೆ ವೇತನದೊಂದಿಗೆ 30 ದಿಗಳ ರಜೆಯನ್ನು ನೀಡಲಾಗುವುದು, ನಂತರ 6 ತಿಂಗಳ ವರೆಗೆ ವೇತನವಿಲ್ಲದ ವೈಯಕ್ತಿಕ ರಜೆಯಲ್ಲಿ ಇರಿಸಲಾಗುತ್ತದೆ ಎಂದಿದೆ.
ಒಂದುವೇಳೆ ಈ ಸಮಯಾವಕಾಶದಲ್ಲಿಯೂ ಉದ್ಯೋಗಿಗಳು ಲಸಿಕೆಯನ್ನು ತೆಗೆದುಕೊಂಡಿಲ್ಲವಾದಲ್ಲಿ ಕೆಲಸದಿಂದಲೇ ಅವರನ್ನು ವಜಾ ಗೊಳಿಸುವುದಾಗಿ ತಿಳಿಸಿದೆ.








