ಡಿಸಿಎಂ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರ – ಚೆನ್ನೈ ಆಸ್ಪತ್ರೆಗೆ ಶಿಫ್ಟ್ Gopala Karajola health
ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ. Gopala Karajola health

ಇತ್ತೀಚೆಗೆ ತಮ್ಮ ಇಡೀ ಕುಟುಂಬ ಕೊರೋನಾ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗುತ್ತಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದರು. ಇದೀಗ ಕೊರೋನಾ ಸೋಂಕಿಗೆ ತುತ್ತಾಗಿರುವ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.

ಗೋಪಾಲ ಕಾರಜೋಳ ಅವರು ಸೋಂಕಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆದರೆ ಆರೋಗ್ಯದ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ ಎಂದು ಹೇಳಲಾಗಿದೆ.
ಹೀಗಾಗಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಗೋಪಾಲ ಕಾರಜೋಳ ಅವರನ್ನು ಚೆನ್ನೈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.








